Legal Awareness Programme @ Gurukula

As part of Legal Awareness Movement, Gurukula PU College organized Legal Awareness Program on “Constitutional Fundamental Rights, Fundamental Duties, Rights and Protections of Child Right to Education Act” on November 11, 2021. Ms. Sushma Murali, Coordinator, Gurukula Public School, was as a resource person for this program and made the students aware of basic duties and measures to be taken against exploitation.

Mr. Arun D’Silva, Principal of Gurukula PU College delivered the introductory remarks and Mr. Mohan K, Principal of Gurukula Public School addressed the gathering. The program was narrated by Miss. Suparna lecturer in Statistics of Gurukula PU College.


ಗುರುಕುಲ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಆಂದೋಲನದ ಅಂಗವಾಗಿ ನವೆಂಬರ್ 11 2021 ರಂದು "ಸಾಂವಿಧಾನಿಕ ಮೂಲಭೂತ ಹಕ್ಕುಗಳು, ಮೂಲಭೂತ ಕರ್ತವ್ಯಗಳು, ಮಕ್ಕಳ ಹಕ್ಕು ಮತ್ತು ರಕ್ಷಣೆಗಳು ಶಿಕ್ಷಣ ಹಕ್ಕು ಕಾಯ್ದೆ" ಎಂಬ ವಿಚಾರದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಸುಷ್ಮಾ ಮುರಳಿ, ಸಂಯೋಜಕರು ಗುರುಕುಲ ಪಬ್ಲಿಕ್ ಸ್ಕೂಲ್ ಇವರು ಆಗಮಿಸಿದ್ದು ವಿದ್ಯಾರ್ಥಿಗಳಿಗೆ ಮೂಲಭೂತ ಕರ್ತವ್ಯಗಳು ಹಾಗೂ ಶೋಷಣೆಯದಲ್ಲಿ ಅದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಗುರುಕುಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅರುಣ್ ಡಿಸಿಲ್ವಾರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು ಅಂತೆಯೇ ಗುರುಕುಲ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲರಾದ ಶ್ರೀ ಮೋಹನ್ ಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಗುರುಕುಲ ಪದವಿಪೂರ್ವ ಕಾಲೇಜಿನ ಸಂಖ್ಯಾಶಾಸ್ತ್ರ ಉಪನ್ಯಾಸಕಿ ಕುಮಾರಿ ಸುಪರ್ಣಾರವರು ಕಾರ್ಯಕ್ರಮ ನಿರೂಪಿಸಿದರು.